
ಪ್ರಮುಖ ಸುದ್ದಿ
ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂರ್ನಾಡು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ರಾಜ್ಯ( ಮಡಿಕೇರಿ), ಡಿ.13:- ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಚಿಕ್ಕಮಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಆಯೋಜಿತವಾಗಿದ್ದ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಎಂ. ಫಾತಿಮ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಮತ್ತು ಪಿ.ಪಿ. ಶ್ರೀರಕ್ಷ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಉಪನ್ಯಾಸಕಿಯಾರಾದ ಗೀತಾ ಮತ್ತು ಸಿ.ಪಿ. ಕಾವೇರಮ್ಮ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ. ದೇವಕ್ಕಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)