ದೇಶಪ್ರಮುಖ ಸುದ್ದಿ

ಅಮಿತ್ ಶಾರನ್ನು ಭೇಟಿಯಾದ ಬಿ.ವೈ.ವಿಜಯೇಂದ್ರ

ಬೆಂಗಳೂರು,ಡಿ.14-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದಾರೆ.

ವಿಜಯೇಂದ್ರ ಅವರು ನವದೆಹಲಿಯಲ್ಲಿ ನಿನ್ನೆ ರಾತ್ರಿ ಭೇಟಿಯಾಗಿದ್ದಾರೆ. ಈ ವೇಳೆ ಅಮಿತ್ ಶಾ ಅವರು ವಿಜಯೇಂದ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಮಾಡಿದ ಪ್ರಯತ್ನವನ್ನು ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ಹೊತ್ತು ಇಬ್ಬರೂ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಮುಂಬರುವ ದಿನಮಾನಗಳಲ್ಲಿ ವಿಜಯೇಂದ್ರ ಅವರಿಗೆ ಪಕ್ಷ ಸಂಘಟನೆಯಲ್ಲಿ ಮಹತ್ವದ ಹುದ್ದೆ ನೀಡುವ ಮುನ್ಸೂಚನೆಯನ್ನೂ ನೀಡಿದ್ದಾರೆ. ಅದರಲ್ಲೂ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಪಾಲಿಗೆ ಬಂದಿರುವುದು ಅಮಿತ್ ಶಾ ಅವರಿಗೆ ಹೆಚ್ಚಿನ ಖುಷಿ ಕೊಟ್ಟಿದೆ ಎಂದು ತಿಳಿದು ಬಂದಿದೆ.

ಕಳೆದ ವಾರ ಕೊನೆಗೊಂಡ ರಾಜ್ಯದ 15 ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿಜಯೇಂದ್ರ ಅವರು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳು ಬಿಜೆಪಿ ವಶವಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. (ಎಂ.ಎನ್)

Leave a Reply

comments

Related Articles

error: