
ಕರ್ನಾಟಕ
ಕೆಎಸ್ಆರ್ ಟಿಸಿ- ಮಿನಿ ಬಸ್ ನಡುವೆ ಡಿಕ್ಕಿ: ಹಲವರಿಗೆ ಗಾಯ
ಹೊಸನಗರ,ಡಿ.14- ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿರುವ ಘಟನೆ ಸಮೀಪದ ಚಂಗೋಳ್ಳಿನಲ್ಲಿ ನಡೆದಿದೆ.
ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಿಗಂದೂರಿನಿಂದ ಹೊರಟ ಕೆಎಸ್ಆರ್ ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತಿದ್ದ ಮಿನಿ ಬಸ್ ಚಾಲಕರ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಮಿನಿ ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದರು.
ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. (ಎಂ.ಎನ್)