ಮೈಸೂರು

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ  ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

ಮೈಸೂರು,ಡಿ.16:- ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ  ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಛೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ  ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಅವುಗಳನ್ನು ಮರೆಮಾಚಲು ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವುದು ಸರಿಯಲ್ಲ. ಪಾಕಿಸ್ತಾನ,ಬಾಂಗ್ಲಾದೇಶ, ಅಪ್ಘಾನಿಸ್ತಾನದಿಂದ ಬಂದ ವಲಸಿಗರನ್ನು ಜೈಲಿನಲ್ಲಿಡುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಅಂತರರಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನದ 14,21,25 ನೇ ವಿಧಿಗಳ ಉಲ್ಲಂಘನೆ ಆಗಿದೆ. ಆದ್ದರಿಂದ ಈ ಅಸಂವಿಧಾನಿಕ ಮಸೂದೆಯನ್ನು ರದ್ದು ಪಡಿಸಬೇಕೆಂದು   ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಚಿಕ್ಕ ಜವರಯ್ಯ, ದೇವರಾಜು, ಯಡದೊರೆ ಮಹದೇವಯ್ಯ, ಸಂತೋಷ್, ಮೂರ್ತಿ ಕಲ್ಲಹಳ್ಳಿ, ಯಡಕೊಳ ಯತೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: