ಮೈಸೂರು

ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಪೊಲೀಸ್ ಪೇದೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬೇಗೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಕಬ್ಬಹಳ್ಳಿ ಗ್ರಾಮದ ನಿವಾಸಿ ಪ್ರಸಾದ್ ಎಂಬುವರೇ ನೇಣಿಗೆ ಶರಣಾದ ವ್ಯಕ್ತಿ. 2008 ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಯಾಗಿ ಯಳಂದೂರು ಹಾಗೂ ಬೇಗೂರು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು. ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣೆಯಲ್ಲಿ  ಕಳೆದ 3 ತಿಂಗಳಿಂದ ವಿಶೇಷ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಪಿಎಸ್ಐ ಕಿರಣ್ ಕುಮಾರ್ ಸಿಪಿಐ ಕೃಷ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆಯ ನಂತರ ಕಾರಣ ತಿಳಿದು ಬರಬೇಕಿದೆ.

Leave a Reply

comments

Related Articles

error: