ದೇಶಪ್ರಮುಖ ಸುದ್ದಿ

ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ

ನವದೆಹಲಿ,ಡಿ.17-ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಪಾಕಿಸ್ತಾನ ವಿಶೇಷ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2007ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್ 19ರಂದು ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿತ್ತು.

ಪರ್ವೇಜ್ ಮುಶ್ರಫ್ ಸಂವಿಧಾನವನ್ನು ಕಾನೂನುಬಾಹಿರವಾಗಿ ಅಮಾನತುಗೊಳಿಸಿದ್ದಾರೆ ಮತ್ತು 2007 ರಲ್ಲಿ ತುರ್ತು ನಿಯಮವನ್ನು ರೂಪಿಸಿದ್ದಾರೆ ಎಂಬ ಆರೋಪವಿದೆ. ಪೇಶಾವರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಾಕರ್ ಅಹ್ಮದ್ ಸೇಠ್ ನೇತೃತ್ವದ ಪಾಕಿಸ್ತಾನದ ವಿಶೇಷ ನ್ಯಾಯಾಲಯದ ಮೂವರು ಸದಸ್ಯರ ಪೀಠವು ಮಂಗಳವಾರ ಮಾಜಿ ಮಿಲಿಟರಿ ಆಡಳಿತಗಾರ ಪರ್ವೇಜ್ ಮುಶ್ರಫ್ ಅವರ ವಿರುದ್ಧದ ದೇಶದ್ರೋಹ ಪ್ರಕರಣದಲ್ಲಿ ಮರಣದಂಡನೆಯನ್ನು ವಿಧಿಸಿದೆ.

2001 ರಿಂದ 2008 ರವರೆಗೆ ಅಧ್ಯಕ್ಷರಾಗಿದ್ದ ಮುಶ್ರಫ್ ಪಾಕಿಸ್ತಾನದ ದೀರ್ಘಕಾಲ ಸೇವೆ ಸಲ್ಲಿಸಿದ ಆಡಳಿತಗಾರರಲ್ಲಿ ಒಬ್ಬರಾಗಿದ್ದರು. ನಾಲ್ಕು ವರ್ಷದ ಹಿಂದೆ ಲಂಡನ್ ಗೆ ಪರಾರಿಯಾಗಿದ್ದ ಮುಶ್ರಫ್ ನಂತರ ಕಳೆದ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತೆ ಪಾಕಿಸ್ಥಾನಕ್ಕೆ ಆಗಮಿಸಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಪರ್ವೇಜ್ ಮುಶ್ರಫ್ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: