ದೇಶಪ್ರಮುಖ ಸುದ್ದಿ

ಮುಸ್ಲಿಮರ ಅಲ್ಪಸಂಖ್ಯಾತ ಮಾನ್ಯತೆ ರದ್ದು ಮಾಡುವಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ

ಲಖನೌ: ಭಾರತದಲ್ಲಿ 20 ಕೋಟಿಗೂ ಅಧಿಕ ಸಂಖ್ಯೆಯ ಮುಸ್ಲಿಮರ ಸಂಖ್ಯೆ ಇದ್ದು, ಮುಸ್ಲಿಂ ಸಮುದಾಯಕ್ಕೆ ನೀಡಿರುವ ಅಲ್ಪಸಂಖ್ಯಾತ ಸ್ಥಾನಮಾನವನ್ನು ಹಿಂಪಡೆಯುವ ಕುರಿತು ಚಿಂತನೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್‍ ಆಗ್ರಹಿಸಿದ್ದಾರೆ.

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನದ ಕುರಿತು ಟ್ವೀಟ್ ಮಾಡಿರುವ ಗಿರಿರಾಜ್, ಅಮೆರಿಕದ ಪ್ಯೂ ರಿಸರ್ಚ್ ಸಂಸ್ಥೆಯ ವರದಿಯನ್ನೂ ಕೂಡ ಶೇರ್ ಮಾಡಿದ್ದಾರೆ. ಈ ವರದಿಯಲ್ಲಿ ಭಾರತದಲ್ಲಿ ಮುಸ್ಲೀಮರ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದೇ ರೀತಿ ಮುಂದುವರಿದರೆ 2050ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಲಿದೆ ಎಂದಿದೆ.

ಉತ್ತರ ಪ್ರದೇಶದಲ್ಲಿ ಚುಣಾವಣೆ ಬಿಸಿ ಇರುವ ಸಂದರ್ಭ ಕೆಂದ್ರ ಸಚಿವರ ಈ ಹೇಳಿಕೆ ವಿವಾದಕ್ಕೀಡಾಗಿದೆ. ಮಾತ್ರವಲ್ಲ ಕೇಂದ್ರ ಸರ್ಕಾರದ ಮುಂದಿನ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಯಾಗಬಹುದು ಎಂಬ ಚರ್ಚೆಗೆ ನಾಂದಿ ಹಾಡಿದೆ.

Leave a Reply

comments

Related Articles

error: