ಪ್ರಮುಖ ಸುದ್ದಿ

ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಲು ಮುಂದಾದ ರಾಜ್ಯ ಸರ್ಕಾರ : ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅಸಮಾಧಾನ

ರಾಜ್ಯ(ಬೆಂಗಳೂರು)ಡಿ.18:- ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟಿನ್ ಹೆಸರಿನ ಬದಲು ಮಹರ್ಷಿ ವಾಲ್ಮಿಕಿಯವರ ಹೆಸರಿಡಲು ಮುಂದಾಗಿದೆ. ಹೀಗಾಗಿ ಈ ಕುರಿತು  ಟ್ವೀಟರ್  ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ   ಮಾಜಿ ಸಿಎಂ ಸಿದ್ಧರಾಮಯ್ಯ, ಇಂದಿರಾ ಕ್ಯಾಂಟೀನ್ ಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮಿಕಿಯವರ ಹೆಸರು ಇಡಲು ಮುಂದಾಗಿದೆ. ಇಂದಿರಾ ಕ್ಯಾಂಟೀನ್ ಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮಿಕಿಯವರ ಹೆಸರು ಇಡುವ ಯೋಜನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರ ಗೌರವವಿದೆ. ಅವರ ಹೆಸರನ್ನು ತನ್ನ ಕ್ಷುಲ್ಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅವರಿಗೆ ಅವಮಾನ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಜಾರಿಗೆ ತಂದಿದ್ದರು. ಈ ಯೋಜನೆ ಮೂಲಕ ಬಡವರಿಗೆ 10 ರೂ.ಗೆ ಊಟ ನೀಡಲಾಗುತ್ತಿದೆ. ಇನ್ನು ಈ ಯೋಜನೆಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲು ಸರ್ಕಾರ ಮುಂದಾಗಿದೆ. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: