ದೇಶಪ್ರಮುಖ ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ ಎಫೆಕ್ಟ್: ದಿಲ್ಲಿಯಲ್ಲಿ 13 ಮೆಟ್ರೋ ನಿಲ್ದಾಣಗಳು ಬಂದ್

ನವದೆಹಲಿ,ಡಿ.19-ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದಿಲ್ಲಿಯ ವಿವಿಧೆಡೆ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ 13 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ ಎಂದು ದಿಲ್ಲಿ ಮೆಟ್ರೊ ರೈಲು ಕಾರ್ಪೊರೇಷನ್ ಮಾಹಿತಿ ನೀಡಿದೆ. ಅಲ್ಲದೆ, ಕೆಂಪು ಕೋಟೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ರೈಲು ಸಂಚಾರ ಇಲ್ಲದ ಕಾರಣ ಹಾಗೂ ಕೆಲವಡೆ ದಿಲ್ಲಿ ಪೊಲೀಸರು ಸಂಚಾರ ನಿರ್ಬಂಧಿಸಿರುವ ಕಾರಣ ಹಲವೆಡೆ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಇಂಡಿಗೊ ಏರ್‌ಲೈನ್ಸ್, ದಿಲ್ಲಿ-ಗುಡಗಾಂವ್ ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದ್ದು, ವಿಮಾನ ಪ್ರಯಾಣಿಕರು ಮುಂಚಿತವಾಗಿಯೇ ಯೋಜನೆ ರೂಪಿಸಿಕೊಂಡು ಹೊರಡಿ ಎಂದು ಸಲಹೆ ನೀಡಿದೆ.(ಎಂ.ಎನ್)

Leave a Reply

comments

Related Articles

error: