ಮೈಸೂರು

ಹೂಟಗಳ್ಳಿ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ

ಮೈಸೂರು,ಡಿ.20:- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹೂಟಗಳ್ಳಿ ಗ್ರಾಮದಲ್ಲಿಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು.

ಎಸ್.ಸಿ.ಪಿ.ಯೋಜನೆ ಅಡಿ 99ಲಕ್ಷರೂ.ಗಳ ಅನುದಾನ ದಲ್ಲಿ ಹೂಟಗಳ್ಳಿ ಗ್ರಾಮದ ಎಸ್.ಸಿ.ಕಾಲೋನಿಯ ಸಿಸಿ ರಸ್ತೆ ಮತ್ತು ಒಳ ಚರಂಡಿ ಕಾಮಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಲೋಕೋಪಯೋಗಿ ಇಲಾಖೆಯ 4ಕೋಟಿ ರೂ.ಗಳ ಅನುದಾನದಲ್ಲಿ ಕೆ.ಹೆಚ್.ಬಿ.ಬಡಾವಣೆಯ ಪರಿಮಿತಿಯಲ್ಲಿ ಚರಂಡಿ ನಿರ್ಮಾಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಹಾಗೂ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಲಾಯಿತು. ತದ ನಂತರ ಹೂಟಗಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಿತಿ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಲಾಯಿತು.

ಈ ವೇಳೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: