ದೇಶಪ್ರಮುಖ ಸುದ್ದಿ

ಪಾಕ್ ಭಯೋತ್ಪಾದಕರ ಟಾರ್ಗೆಟ್ ಪ್ರಧಾನಿ ನರೇಂದ್ರ ಮೋದಿ: ಗುಪ್ತಚರ ಇಲಾಖೆ ಎಚ್ಚರಿಕೆ

ನವದೆಹಲಿ,ಡಿ.20-ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಪಾಕ್‌ ಮೂಲದ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಡಿ.22ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬಿಜೆಪಿ ಬೃಹತ್‌ ರ್ಯಾಲಿ ಆಯೋಜಿಸಿದೆ. ಈ ವೇಳೆ ಪಾಕ್‌ ಮೂಲದ ಜೈಷ್‌-ಇ-ಮೊಹಮ್ಮದ್‌ ಸಂಘಟನೆಯ ಭಯೋತ್ಪಾದಕರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂದು ಗುಪ್ತಚರ ಇಲಾಖೆ ಪ್ರಧಾನಿ ವಿಶೇಷ ಭದ್ರತಾ ಪಡೆ ಹಾಗೂ ದಿಲ್ಲಿ ಪೊಲೀಸ್‌ಗೆ ಸೂಚನೆ ನೀಡಿದೆ.

ಗುಪ್ತಚರ ಇಲಾಖೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಹೈ ಎಲರ್ಟ್‌ ಘೋಷಣೆ ಮಾಡಲಾಗಿದ್ದು, ಗರಿಷ್ಠ ಭದ್ರತೆಗೆ ಸೂಚನೆ ನೀಡಲಾಗಿದೆ. ದಿಲ್ಲಿ ಪೊಲೀಸ್‌ ಹಾಗೂ ಪ್ರಧಾನಿ ವಿಶೇಷ ಭದ್ರತಾ ಪಡೆ ರಾಮ್‌ಲೀಲಾ ಮೈದಾನದ ಭದ್ರತೆಯ ಜವಾಬ್ದಾರಿ ಹೊತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಕ್ರಮ ಕಾಲೋನಿಗಳನ್ನು ಸಕ್ರಮಗೊಳಿಸುವ ನಿಟ್ಟಿನಲ್ಲಿ ಮೋದಿ ರ್ಯಾಲಿಯನ್ನು ಬಿಜೆಪಿ ಆಯೋಜಿಸಿದೆ. ರ್ಯಾಲಿಯಲ್ಲಿ ಎನ್‌ಡಿಯ ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ಸಂಪುಟದ ಸಚಿವರು ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಇತ್ತೀಚೆಗೆ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿತ್ತು. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪು ಹಾಗೂ ವರ್ಷದ ಆರಂಭದಲ್ಲೇ ಏರ್‌ಸ್ಟ್ರೈಕ್‌ ಸೇರಿದಂತೆ ಇನ್ನಿತರ ಕ್ರಮಗಳು ಮೋದಿಯನ್ನು ಗುರಿಯಾಗಿಸಲು ಕಾರಣ ಎಂದು ಅಂದಾಜಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: