ಮನರಂಜನೆ

ವೆಬ್ ಸಿರೀಸ್ ಮೂಲಕ ಡಿಜಿಟಲ್ ಕ್ಷೇತ್ರಕ್ಕೂ ಎಂಟ್ರಿಕೊಟ್ಟ ನಟಿ ಸಮಂತಾ

ರಾಜ್ಯ(ಬೆಂಗಳೂರು)ಡಿ.20:- ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡ ನಟಿ ಸಮಂತಾ ವೆಬ್ ಸಿರೀಸ್ ಮೂಲಕ ಡಿಜಿಟಲ್ ಕ್ಷೇತ್ರಕ್ಕೂ ಎಂಟ್ರಿಕೊಟ್ಟಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್-2’ ವೆಬ್ ಸಿರೀಸ್ ನಲ್ಲಿ ವಿಲನ್ ಪಾತ್ರದಲ್ಲಿ ಸಮಂತಾ ಕಾಣಿಸಿಕೊಂಡಿದ್ದಾರೆ. ಸಮಂತಾ ಪಾತ್ರದ ಬಗ್ಗೆ ರಹಸ್ಯ ಕಾಯ್ದುಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ

ಇತ್ತೀಚಿಗಷ್ಟೇ ‘ದಿ ಫ್ಯಾಮಿಲಿ ಮ್ಯಾನ್‌’ ವೆಬ್‌ ಸಿರೀಸ್‌ ಸಾಕಷ್ಟು ಜನಮನ್ನಣೆ ಗಳಿಸಿತ್ತು. ಇದರ ಬೆನ್ನಲ್ಲೇ ಪಾರ್ಟ್‌ 2 ಕೂಡ ಸಿದ್ಧವಾಗಿದ್ದು, ಈ ಬಾರಿ ಸಮಂತಾ ಪ್ರಮುಖ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಂಡಿರುವುದು ಕುತೂಹಲ ಹೆಚ್ಚಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: