Uncategorized

ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಗಣ್ಯರು

ಉಡುಪಿ,ಡಿ.20- ಉಡುಪಿ ಅಷ್ಟಮಠದ ಹಿರಿಯ ಸ್ವಾಮೀಜಿಗಳಾದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಯೋಗಗುರು ಬಾಬಾ ರಾಮ್ ದೇವ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಅನೇಕರು ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿದ್ದಾರೆ.

ಎಚ್.ಡಿ.ದೇವೇಗೌಡರು, ಶ್ರೀಗಳ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಯೋಗಗುರು ಬಾಬಾ ರಾಮ್ ದೇವ್, ಶ್ರೀಗಳವರ ಆರೋಗ್ಯ ಶೀಘ್ರ ಸುಧಾರಿಸಿ ಗುಣಮುಖರಾಗುವಂತೆ ಪ್ರಾರ್ಥಿಸಿ ಹರಿದ್ವಾರದ ಪತಂಜಲಿ ಯೋಗ ಪೀಠದಲ್ಲಿ ವಿಶೇಷ ಭಜನೆ ಪ್ರಾರ್ಥನೆ ನಡೆಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್, ಪೇಜಾವರ ಶ್ರೀ ಅನಾರೋಗ್ಯಕ್ಕೆ ಆಘಾತ ವ್ಯಕ್ತಪಡಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಪೇಜಾವರ ಶ್ರೀಗಳು‌ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾ ಪೀಠ ಸೇರಿದಂತೆ ದೇಶಾದ್ಯಂತ ಇರುವ ಶ್ರೀಮಠದ 80ಕ್ಕೂ ಅಧಿಕ ಶಾಖೆಗಳಲ್ಲಿ ಅಭಿಮಾನಿಗಳು, ಶಿಷ್ಯರು, ಹಿತೈಷಿಗಳಿಂದ ವಿಶೇಷ ಜಪ ಹವನ ಭಜನೆ, ಪ್ರಾರ್ಥನೆಗಳು ನಡೆಯುತ್ತಿವೆ.

ಪೇಜಾವರ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯವೂ ನಿಧಾನವಾಗಿ ಚೇತರಿಸಿಕೊಳ್ಳುತ್ತದೆ ಎಂದು ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿ ವದಂತಿ, ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಶ್ರೀಗಳ ಭಕ್ತರು, ಅಭಿಮಾನಿಗಳು ಆತಂಕಕ್ಕೆ ಒಳಾಗುವ ಅಗತ್ಯವಿಲ್ಲ.

ಡಾ. ಸುಧಾ ವಿದ್ಯಾಸಾಗರ ಅವರ ನೇತೃತ್ವದ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದ್ದು, ವಿಶೇಷ ಕಾಳಜಿ ಹಾಗೂ ಮುತುವರ್ಜಿಯಿಂದ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳು ಶೀಘ್ರವೇ ಗುಣಮುಖರಾಗುವುದಾಗಿ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಕ್ತರು ಹಾಗೂ‌ ಅಭಿಮಾನಿಗಳಿಗೂ ಅದೇ ವಿಶ್ವಾಸವಿದೆ ಎಂದಿದ್ದಾರೆ. (ಎಂ.ಎನ್)

Leave a Reply

comments

Related Articles

error: