ಮೈಸೂರು

ಸರ್ಕಾರ ಎಚ್ಚೆತ್ತು ರೈತರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಲಿ : ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು,ಡಿ.23:-  ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರ ರೈತರ ಸಭೆ ಮೈಸೂರಿನ ಗನ್ ಹೌಸ್ ಬಳಿಯ ಕುವೆಂಪು ಪಾರ್ಕ್ ನಲ್ಲಿ ನಡೆಯಿತು.

ಈ ವೇಳೆ ಮೌನಾಚರಣೆಗೈದು  ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಾಲಮನ್ನಾ, ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ರೈತ ಮುಖಂಡ ಕುರುಬೂರು ಶಾಂತಕುಮಾರ್ ನಾಡಿನ ಸಮಸ್ತ ರೈತರಿಗೆ ರೈತದಿನಾಚರಣೆ ಶುಭಾಶಯಗಳನ್ನು ತಿಳಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಪ್ರತಿ ವರ್ಷ ರೈತ ದಿನಾಚರಣೆ ಆಚರಿಸುತ್ತೆ. ಆದರೆ ರೈತರ ಸಮಸ್ಯೆಗಳಿಗೆ ಇಂದಿಗೂ ಕೂಡಾ ಪರಿಹಾರ ಸಿಕ್ಕಿಲ್ಲ. ರೈತ ಉಳಿದರೆ ದೇಶ ಉಳಿಯುವುದು ಎಂಬುದನ್ನು ಸರ್ಕಾರ ತಿಳಿದುಕೊಳ್ಳಬೇಕು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಾಗಿದೆ. ಸೂಕ್ತ ಬೆಲೆ ಇಲ್ಲದೆ ರೈತ ಕಂಗಾಲಾಗಿದ್ದಾ‌ನೆ. ಕೂಡಲೇ ಸರ್ಕಾರಗಳು ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: