ಮೈಸೂರು

ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಗಂಭೀರ ಗಾಯ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು

ಮೈಸೂರು,ಡಿ.26:- ದ್ವಿಚಕ್ರವಾಹನ ಸವಾರರೋರ್ವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಸಿದ್ದಪ್ಪ (30)ಎಂದು ಹೇಳಲಾಗಿದೆ. ವರುಣಾ ಗ್ರಾಮದ ಕೆರೆಯ ಬಳಿ ಮಂಗಳವಾರ ರಾತ್ರಿ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಇವರನ್ನು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮದ್ಯಪಾನ ಮಾಡಿ ಬೈಕ್ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: