ಮೈಸೂರು

ಇಂದು ಮೈಸೂರಿಗೆ ಬಂದ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಬಂಡಲ್

ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಪ್ರಶ್ನೆ ಪತ್ರಿಕೆಗಳ ಬಂಡಲ್ ಗಳು ಮೈಸೂರು ಜಿಲ್ಲಾ ಖಜಾನೆಗೆ ಬಂದು ಸೇರಿವೆ.

ಅತ್ಯಂತ ಬಿಗಿ ಭದ್ರತೆಯೊಂದಿಗೆ ವಿಶೇಷ ವಾಹನದ ಮೂಲಕ ಮೈಸೂರಿಗೆ ತರಿಸಲಾದ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಬಂಡಲ್ ಗಳನ್ನು ಭದ್ರವಾಗಿ ಇರಿಸಲಾಗಿದೆ. ಮೈಸೂರು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಗವಾಗಿ, ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಜಯಪ್ರಕಾಶ್ ಸಮ್ಮುಖದಲ್ಲಿ ಖಜಾನೆಗೆ ರವಾನೆ ಮಾಡಲಾಯಿತು.

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಬಂಡಲ್ ಗಳನ್ನು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಕಟ್ಟದಲ್ಲಿರುವ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇರಿಸಲಾಗಿದೆ.

Leave a Reply

comments

Related Articles

error: