ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಮಿನಿ ವಾಹನಗಳ ಸಂಚಾರಕ್ಕೆ ಅವಕಾಶ

ಮಂಗಳೂರು,ಡಿ.28-ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಮಿನಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ ಗಳಿಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸುವ ಅವಕಾಶ ಕಲ್ಪಿಸಲಾಗಿದೆ.

ಮುಂದಿನ ಆದೇಶದವರೆಗೂ ಪರ್ಯಾಯ ರಸ್ತೆ ಮೂಲಕ ತೆರಳಲು ನಿರ್ದೇಶನ ನೀಡಲಾಗಿದೆ. ಕಾರ್ಕಳ-ಸಂಸೆ-ಕುದುರೆಮುಖ ರಸ್ತೆ ಮತ್ತು ಶಿರಾಡಿ ರಸ್ತೆಗ ಮೂಲಕ ಪ್ರಯಾಣಿಕರು ತೆರಳಲು ಅವಕಾಶ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಪದೇ ಪದೇ ಭೂ ಕುಸಿತ ಉಂಟಾಗಿತ್ತು. ಹೀಗಾಗಿ ಆಗಸ್ಟ್ ತಿಂಗಳಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿ (ಲಘು) ವಾಹನಗಳ ಸಂಚಾರ ಆರಂಭವಾಗಿದೆ. ಆದರೆ ಯಾವುದೇ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಘನ ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. (ಎಂ.ಎನ್)

Leave a Reply

comments

Related Articles

error: