
ಪ್ರಮುಖ ಸುದ್ದಿ
ಡಿ.31 : ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಕೊಡಗು ಭೇಟಿ
ರಾಜ್ಯ( ಮಡಿಕೇರಿ) ಡಿ.28 :- ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸಚಿವರು ಆದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಡಿ.31 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿರ್ಮಿಸಲಾಗುತ್ತಿರುವ 450 ಹಾಸಿಗೆ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಮಾನ್ಯ ಉಪ ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಡಿ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)