ಮೈಸೂರು

ಸ್ವಚ್ಛ  ಸರ್ವೇಕ್ಷಣೆ ಹಿನ್ನೆಲೆಯಲ್ಲಿ ನಾಗ್ಪುರ ಕಸ ವಿಲೇವಾರಿ ಘಟಕಕ್ಕೆ ಪಾಲಿಕೆ ತಂಡದೊಂದಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಭೇಟಿ

ಮೈಸೂರು/ನಾಗ್ಪುರ,ಡಿ.31:- ಸ್ವಚ್ಛ  ಸರ್ವೇಕ್ಷಣೆ ಹಿನ್ನೆಲೆಯಲ್ಲಿ ನಾಗ್ಪುರ ಕಸ ವಿಲೇವಾರಿ ಘಟಕಕ್ಕೆ ಪಾಲಿಕೆ ತಂಡದೊಂದಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಭೇಟಿ ನೀಡಿದರು.

ನಾಗ್ಪುರ ಮಾದರಿಯಲ್ಲಿ ಮೈಸೂರಿನಲ್ಲಿಯೂ ಕಸ ವಿಲೇವಾರಿಗೆ ಚಿಂತನೆ ನಡೆಸಲಾಗಿದ್ದು, ಮೈಸೂರಿನಲ್ಲಿ  ಸುಯೆಜ್ ಫಾರಂನಲ್ಲಿ ಆಧುನಿಕ ಕಸವಿಲೇವಾರಿ ಘಟಕ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದೆ. ಕಸ ವಿಲೇವಾರಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಉಸ್ತುವಾರಿ ಸಚಿವ ವಿ ಸೋಮಣ್ಣ ಸೂಚಿಸಿದ್ದರು. ಶೀಘ್ರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದರು. ಕಸ ವಿಲೇವಾರಿ ಪಾಲಿಕೆಗೆ ದೊಡ್ಡ ಸಮಸ್ಯೆ ಆಗಿದ್ದು, ಕಳೆದ ಬಾರಿ ಕಸ ವಿಲೇವಾರಿ ಸಮಸ್ಯೆ ಕೂಡ  ಸ್ವಚ್ಛ ನಗರಿ ಪಟ್ಟ ಕೈತಪ್ಪಲು ಕಾರಣವಾಗಿತ್ತು. ನಾಗ್ಪುರದಲ್ಲಿ ಕಸ ವಿಲೇವಾರಿ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದು, ನಾಗ್ಪುರದ ಅಧಿಕಾರಿಗಳೊಂದಿಗೆ  ಚರ್ಚೆ ನಡೆಸಿದ್ದಾರೆ.

ಈ ಸಂದರ್ಭ ಮೇಯರ್ ಪುಷ್ಪಲತಾ ಜಗನ್ನಾಥ್ ಕೂಡ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: