ದೇಶ

ಕಾಮನ್ ವೆಲ್ತ್ ಭಾರತ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಒಲಿಂಪಿಕ್ಸ್ ಅಸೋಸಿಯೇಷನ್ ತೀರ್ಮಾನ

ನವದೆಹಲಿ,ಡಿ.31-ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತೀರ್ಮಾನಿಸಿದೆ.

ನಿನ್ನೆ ನಡೆದ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಎಂದಿದೆ.

2022 ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ. ಇದೇ ವೇಳೆ ಭಾರತ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಮನವಿ ಮೇರೆಗೆ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಭಾರತ ತಂಡ ಭಾಗವಹಿಸದ ಕಾರಣ ಪ್ರತ್ಯೇಕವಾಗಿ ಕಾಮನ್ ವೆಲ್ತ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: