ಪ್ರಮುಖ ಸುದ್ದಿ

ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಉಮೇಶ್ ಕತ್ತಿ

ರಾಜ್ಯ(ಬೆಂಗಳೂರು)ಡಿ.31:- ರಾಜ್ಯಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರ ಲಾಬಿ ಜೋರಾಗಿದೆ. ಈ ನಡುವೆ ಮಂತ್ರಿಗಿರಿಗಾಗಿ ಬಿಗಿಪಟ್ಟು ಹಿಡಿದಿರುವ ಶಾಸಕ ಉಮೇಶ್ ಕತ್ತಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಪದೇ ಪದೇ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಈ ನಡುವೆ ಇಂದು ಸಹ ಶಾಸಕ ಉಮೇಶ್ ಕತ್ತಿ  ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಚರ್ಚೆ ನಡೆಸಿದ್ದಾರೆ. ಹಾಗೆಯೇ ಬೆಳಿಗ್ಗೆಯೇ ಭೇಟಿ ನೀಡಿದ್ದ ಶಾಸಕ ಉಮೇಶ್ ಕತ್ತಿ ಸಿಎಂ ಬಿಎಸ್ ಯಡಿಯೂರಪ್ಪ ಜತೆ ವಾಕಿಂಗ್ ಗೆ ತೆರಳಿದ್ದರು ಎನ್ನಲಾಗಿದೆ.

ರಾಣಿಬೆನ್ನೂರು ಮಾಜಿ ಶಾಸಕ ಆರ್. ಶಂಕರ್ ಸಹ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದ್ದರು. ಎಂಎಲ್ ಸಿ ಮಾಡಿ ಮಂತ್ರಿ ಮಾಡುವುದಾಗಿ ಸಿಎಂ ಬಿಎಸ್ ವೈ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಆರ್.ಶಂಕರ್ ಸಿಎಂ ಬಿಎಸ್ ವೈ ಬಳಿ ಮಾತನಾಡಲು ಡಾಲರ್ಸ್ ಕಾಲೋನಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: