ದೇಶ

ನೀರು ತುಂಬಿದ್ದ ಬಕೆಟ್ ಗೆ ಬಿದ್ದು 9 ತಿಂಗಳ ಮಗು ಸಾವು

ಸುರತ್ಕಲ್,ಡಿ.31-ನೀರು ತುಂಬಿದ್ದ ಬಕೆಟ್ ಒಳಗೆ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಸುರತ್ಕಲ್ ಕಡಂಬೋಡಿ ಬಳಿ ಮಂಗಳವಾರ ನಡೆದಿದೆ.

ಒಂಬತ್ತು ತಿಂಗಳ ಮಗು ಯಶ್ ನೀರು ತುಂಬಿದ್ದ ಬಕೆಟ್ ನಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಬೆಳಗಿನ ಕೆಲಸ ಮುಗಿಸಿ ಮಲಗಿದ್ದ ವೇಳೆ ಮಗು ಆಟವಾಡುತ್ತಿತ್ತು. ಈ ವೇಳೆ ಆಯತಪ್ಪಿ ನೀರಿದ್ದ ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ.

ಮಧ್ಯಪ್ರದೇಶ ಮೂಲದ ಕುಟುಂಬ ಇಲ್ಲಿನ ಎಂಆರ್ ಪಿಎಲ್ ನಲ್ಲಿ ಕೆಲಸಕ್ಕೆ ಬಂದಿದ್ದು ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: