ಕರ್ನಾಟಕದೇಶಪ್ರಮುಖ ಸುದ್ದಿ

ವಿಶ್ವದ ಅತ್ಯುತ್ತಮ ವಿವಿಗಳಲ್ಲಿ 8ನೇ ಸ್ಥಾನ ಪಡೆದ ಬೆಂಗಳೂರಿನ ಐಐಎಸ್‌ಸಿ

ನವದೆಹಲಿ: ವಿಶ್ವದ 10 ಶ್ರೇಷ್ಠ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ – ಐಐಎಸ್‍ಸಿ 8ನೇ ಸ್ಥಾನ ಪಡೆದಿದೆ. ಭಾರತದ ವಿವಿಯೊಂದು ಟಾಪ್ 10 ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಸ್ಥಾನ ಪಡೆದ ಖ್ಯಾತಿ ಐಐಎಸ್‍ಸಿ ಪಾಲಾಗಿದೆ.

ಟೈಮ್ಸ್ ಹೈಯರ್ ಎಜುಕೇಶನ್ ಜಾಗತಿಕ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಂತೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ 8ನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕಾದ ಕ್ಯಾಲಿಫೋರ್ನಿಯಾ ತಾಂತ್ರಿಕ ಶಿಕ್ಷಣ ಸಂಸ್ಥೆ ಪ್ರಥಮ ಸ್ಥಾನದಲ್ಲಿದೆ. ಫ್ರಾನ್ಸ್ ನ ಎಕೋಲ್ ನಾರ್ಮಲೆ ಎರಡನೇ ಸ್ಥಾನದಲ್ಲಿದೆ. ಕಳೆದ ವರ್ಷ ದೇಶದ 2 ವಿದ್ಯಾಸಂಸ್ಥೆಗಳು ಟಾಪ್ 20ಯಲ್ಲಿ ಸ್ಥಾನ ಪಡೆದಿದ್ದವು. ಆದರೆ, ಇದೇ ಮೊದಲ ಬಾರಿಗೆ ಟಾಪ್ 10 ಪಟ್ಟಿಯಲ್ಲಿ ಐಐಎಸ್‍ಸಿ ಸ್ಥಾನ ಪಡೆದಿದೆ. 1909ರಲ್ಲಿ ಅಂದಿನ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು  ಜೆಮ್‍ಶೆಡ್ ಟಾಟಾ ಅವರ ಮಹತ್ವಕಾಂಕ್ಷೆಯಂತೆ ಸಂಸ್ಥೆಯನ್ನು ಆರಂಭಿಸಲಾಗಿತ್ತು.

Leave a Reply

comments

Related Articles

error: