ಮೈಸೂರು

ನೂತನ ಮಕ್ಕಳ ಆಸ್ಪತ್ರೆ ಉದ್ಘಾಟನೆ

ಮೈಸೂರಿನ ಕೆ.ಆರ್.ನಗರದಲ್ಲಿ ಮಂಗಳವಾರ ನೂತನವಾದ ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲಾಯಿತು.

ಸುಮಾರು 8 ಕೋಟಿ ವೆಚ್ಚದಲ್ಲಿ ಈ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್  ನೂತನ ಕಟ್ಟಡಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವ ರಮೇಶ್ ಕುಮಾರ್ ನಮ್ಮ ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು,  ಭ್ರಷ್ಟ ರಾಜಕಾರಣಿಗಳಿಗೆ ಮುಂಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠಕಲಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ.ಮಹೇಶ್, ಸಂಸದ ಪುಟ್ಟರಾಜು, ತಾ.ಪಂಚಾಯತ್ ಅಧ್ಯಕ್ಷ ಮಂಜುನಾಥ್, ಪುರಸಭೆ ಅಧ್ಯಕ್ಷೆ ಕವಿತ ವಿಜಯಕುಮಾರ್  ಮುಂತಾದವರು ಉಪಸ್ಥಿತರಿದ್ದರು.

Leave a Reply

comments

Related Articles

error: