ಮೈಸೂರು

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದಲ್ಲಿ ನಡೆದಿದೆ.

ಭೈರಾಪುರ ಗ್ರಾಮದ ನಿವಾಸಿ ೪೦ ವರ್ಷದ ಕಾಂತರಾಜು ಎಂಬಾತನೇ ಮೃತ ದುರ್ದೈವಿ.  ಇಂಡವಾಳು ಗ್ರಾಮದಲ್ಲಿ ಮೂರು ದಿನಗಳಿಂದ ಮಾರಮ್ಮನ ಜಾತ್ರೆ ನಡೆಯುತ್ತಿತ್ತು. ಜಾತ್ರೆಗೆಂದು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ವಿದ್ಯುತ್ ದೀಪಾಲಂಕಾರ ತೆರವುಗೊಳಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ.

ಮೈಸೂರು ತಾಲೂಕಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

comments

Related Articles

error: