ಕರ್ನಾಟಕಪ್ರಮುಖ ಸುದ್ದಿ

ಪಾರ್ವತಮ್ಮ ರಾಜ್ ಕುಮಾರ್‍ಗೆ ಅನಾರೋಗ್ಯ : ರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು : ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿದ ಕಾರಣ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಮಧ್ಯರಾತ್ರಿ 12 ರ ಸುಮಾರಿಗೆ ಮನೆಯಲ್ಲೇ ತಲೆಸುತ್ತು ಕಾಣಿಸಿಕೊಂಡಿತ್ತು. ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯ ಡಾ. ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ.

Leave a Reply

comments

Related Articles

error: