ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶ, ಮಣಿಪುರದಲ್ಲಿ ಅಂತಿಮ ಹಂತದ ಮತದಾನ ಆರಂಭ

ಲಖನೌ : ಉತ್ತರ ಪ್ರದೇಶ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ಆರಂಭಗೊಂಡಿದ್ದು, ಬಿಗಿ ಭದ್ರತೆ ನಡುವೆ ಮತದಾನ ಪ್ರಕ್ರಿಯೆಗಳು ನಡೆಯುತ್ತಿವೆ. ಉತ್ತರಪ್ರದೇಶದಲ್ಲಿ ಈಗಾಗಲೇ 6 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇಂದು 7ನೇ ಹಂತದಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮತ್ತೊಂದೆಡೆ ಮಣಿಪುರದಲ್ಲಿಯೂ ಎರಡನೆ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ.

ಒಟ್ಟು 404 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಕ್ಷೇತ್ರ ವಾರಣಾಸಿ, ಸೋನ್ ಭದ್ರ, ಮೀರ್ಜ್ ಪುರ್, ಚಂದೌಲಿ ಸೇರಿದಂತೆ ಒಟ್ಟು 7 ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 535 ಅಭ್ಯರ್ಥಿಗಳ ಭವಿಷ್ಯ ಇಂದು ಮತಪಟ್ಟಿಗೆಯಲ್ಲಿ ದಾಖಲಾಗಲಿದೆ. 40 ಕ್ಷೇತ್ರಗಳಲ್ಲಿ ಒಟ್ಟು 1.41 ಕೋಟಿ ಮತದಾರರಿದ್ದು, 64.99 ಲಕ್ಷ ಮಹಿಳೆಯರು, 76.67 ಲಕ್ಷ ಪುರುಷರು ಹಾಗೂ 706 ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ.

ಮಣಿಪುರ ವಿಧಾನಸಭೆಯ 66 ಕ್ಷೇತ್ರಗಳ ಪೈಕಿ ಇಂದು 2ನೇ ಹಾಗೂ ಅಂತಿಮ ಹಂತದಲ್ಲಿ ಒಟ್ಟು 22 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆಗಳು ನಡೆಯುತ್ತಿವೆ. 98 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

Leave a Reply

comments

Related Articles

error: