ಕರ್ನಾಟಕ

ಚೊಚ್ಚಲ ಕೃತಿ ಪ್ರೋತ್ಸಾಹಧನಕ್ಕಾಗಿ ಅರ್ಜಿ

ಮಂಡ್ಯ (ಜ.3): ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗಾಗಿ 25 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಬಯಸುವರು ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ , ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. 18ರಿಂದ 40ವರ್ಷದೂಳಗಿನ ಯಾವುದೇ ಲೇಖಕರು ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಿಖಿತ, ಪ್ರಬಂಧ, ಮಕ್ಕಳಸಾಹಿತ್ಯ ಹಾಗೂ ಇತರೆ ಜ್ಞಾನ ವಿಚಾರಗಳಿಗೆ ಸಂಬಂಧಿಸಿರಬೇಕು.

ಹಸ್ತಪ್ರತಿಗಳನ್ನು  ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ನಹರ ರಸ್ತೆ, ಬೆಂಗಳೂರು ಇಲ್ಲಿಗೆ ಜನವರಿ 25ರ ಒಳಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ 080-22484516/22017704 ನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: