
ಕರ್ನಾಟಕ
ಜನವರಿ 4 ರಿಂದ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ
ಮಂಡ್ಯ (ಜ.3): ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 4 ರಿಂದ 23 ರವರೆಗೆ ಮಂಡ್ಯ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯಾ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಜನವರಿ 4 ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 6 ರಂದು ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ, 7 ರಂದು ಮಳವಳ್ಳಿ ತಾಲ್ಲೂಕು ಆಸ್ಪತ್ರೆ, 8 ರಂದು ಬೆಳಿಗ್ಗೆ 10 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ಇದೇ ದಿನ ಮಧ್ಯಾಹ್ನ 1 ಗಂಟೆಗೆ ಬೆಳ್ಳೂರು ಸಮುದಾಯ ಆರೋಗ್ಯ ಕೇಂದ್ರ, 9 ರಂದು ಅರಕೆರೆ ಸಮುದಾಯ ಆರೋಗ್ಯ ಕೇಂದ್ರ, 10 ರಂದು ಪಾಂಡವಪುರ ಸಾರ್ವಜನಿಕ ಆಸ್ಪತ್ರೆ, 13 ರಂದು ಮದ್ದೂರು ತಾಲ್ಲೂಕು ಆಸ್ಪತ್ರೆ, 14 ರಂದು ಮಳವಳ್ಳಿ ತಾಲ್ಲೂಕು ಆಸ್ಪತ್ರೆ, 17 ರಂದು ಕೆ.ಆರ್.ಪೇಟೆ ತಾಲ್ಲೂಕು ಆಸ್ಪತ್ರೆ, 18ಕ್ಕೆ ಮಿಮ್ಸ್ ಮಂಡ್ಯ ಹಾಗೂ 23 ರಂದು ಶ್ರೀರಂಗಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. (ಎನ್.ಬಿ)