ಕರ್ನಾಟಕ

ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ಪಡೆಯಲು ಅರ್ಜಿ ಆಹ್ವಾನ

ಮಂಡ್ಯ (ಜ.3): ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ 2019-20 ನೇ ಸಾಲಿನ ಫಲಪುಷ್ಪ ಪ್ರದರ್ಶನವನ್ನು ಜವನರಿ 26 ರಿಂದ 30ವರೆಗೆ ಆಯೋಜಿಸಲಾಗಿದೆ.

ಈ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ವಿವಿಧ ಮಳಿಗೆಗಳನ್ನು ಬಾಡಿಗೆಗೆ ಪಡೆಯಲು ಇಚ್ಚಿಸುವವರು ಜನವರಿ 17ರ ಒಳಗೆ ಅರ್ಜಿ ಸಲ್ಲಿಬಹುದು. ಪ್ರತಿ ಮಳಿಗೆಗೆ 6 ಸಾವಿರ ನಿಗಧಿ ಪಡಿಸಲಾಗಿದ್ದು, ಮಳಿಗೆಗಳನ್ನು ಪಡೆಯಲು ತೋಟಗಾರಿಕೆ ಹಾಗೂ ಕೃಷಿಗೆ ಸಂಬಂಧಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಹಾಗೇಯೇ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ವಿವಿಧ ಉದ್ಯಾನ ವನಗಳ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಜನವರಿ 16ರೊಳಗೆ ನೋಂದಾಣಿ ಮಾಡಿಕೊಳ್ಳಬಹುದು ಎಂದು ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08232-220115, 7019594787 ಹಾಗೂ 9738551732ಗೆ ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: