ಕ್ರೀಡೆಮೈಸೂರು

ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿಗೆ ವಿ. ವಿ. ಅಂತರ ಕಾಲೇಜು ಕಬಡ್ಡಿ ಟ್ರೋಫಿ

ಮೈಸೂರು, ಜ. 3: – ತೆಲುಗು ಟೈಟಾನ್ಸ್ ನ ಪ್ರೊ. ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ರಕ್ಷಿತ್ ಪೂಜಾರಿ 2019-20ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮೈಸೂರಿನ ಎಸ್‍ಬಿಆರ್‍ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು ವಿ.ವಿ. ಅಂತರಕಾಲೇಜು ಕಬಡ್ಡಿ ಪ್ರಶಸ್ತಿಯನ್ನು ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ರನ್ನರ್ ಅಫ್ 2ನೇ ಸ್ಥಾನವನ್ನು ಮೈಸೂರಿನ ವಿದ್ಯಾವಿಕಾಸ ಪ್ರಥಮ ದರ್ಜೆ ಕಾಲೇಜು, ಮೂರನೇ ಸ್ಥಾನವನ್ನು ಚನ್ನಪಟ್ಟಣದ ಶ್ರೀ ಆದಿಚುಂಚನಗಿರಿ ಕಾಲೇಜು, ಹಾಗೂ ನಾಲ್ಕನೇ ಸ್ಥಾನವನ್ನು ಸರ್ಕಾರಿ ಕಾಲೇಜು, ಮಂಡ್ಯ ಈ ತಂಡಗಳು ಪಡೆಯಿತು. ವೇದಿಕೆಯಲ್ಲಿದ್ದ ಗಣ್ಯರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ವೆಂಕಟರಾಮು, ಉಪಪ್ರಾಂಶುಪಾಲರಾದ ಬಿ.ಆರ್. ಜಯಕುಮಾರಿ, ಕಾಲೇಜಿನ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ಡಾ. ಎಚ್. ಆರ್. ರಮೇಶ್, ಪ್ರೊ. ರವಿಕುಮಾರ್, ಕನ್ನಡ ವಿಭಾಗದ ಮುಖ್ಯಸ್ಥರು ಪ್ರೊ. ತಿಮ್ಮೇಗೌಡ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಎಚ್. ಎನ್ ಭಾಸ್ಕರ್ ಮತ್ತು ಪಿ.ಎಸ್. ಮಧುಸೂದನ್ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗೆದ್ದ ಹಾಗೂ ರನ್ನರ್ ಅಫ್ ತಂಡಗಳಿಗೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಬೋಧಕ ವರ್ಗ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: