ಮೈಸೂರು

ಹಳೆಯ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಹಲ್ಲೆ : ನಾಲ್ವರ ಬಂಧನ

ಮೈಸೂರು,ಜ.5:- ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮೇಲೆ  ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಗರದ ಕೆ.ಆರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅವಿನಾಶ್, ಕಿರಣ್, ಗಿರೀಶ್, ರವಿ ಎಂದು ಗುರುತಿಸಿದ್ದಾರೆ.  ಬಂಧಿತರಿಂದ ಎರಡು ಬೈಕ್ ಮತ್ತು ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಬಂಧಿತ ನಾಲ್ವರು ಆರೋಪಿಗಳು ಡಿಸೆಂಬರ್ 26 ರಂದು ಆದಿತ್ಯ ಎಂಬವರ ಮೇಲೆ ಹಲ್ಲೆ ಮಾಡಿದ್ದರು.  ಹಳೆಯ ದ್ವೇಷದ ಹಿನ್ನೆಲೆ ಹಲ್ಲೆಗೈದಿದ್ದರು.

ಈ ಕುರಿತು ಕೆ.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: