ಪ್ರಮುಖ ಸುದ್ದಿ

ಮಂಜೂರಾಗಿದ್ದ ಕಾಮಗಾರಿಗಳನ್ನು ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣ : ವಿ.ಪಿ.ನಾಗೇಶ್ ಆರೋಪ

ರಾಜ್ಯ(ಮಂಡ್ಯ)ಜ.6:-  ಶಾಸಕ ಡಾ.ಕೆ.ಅನ್ನದಾನಿ ಅವರು ಪಿ.ಎಂ.ನರೇಂದ್ರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳನ್ನು ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ವಿ.ಪಿ.ನಾಗೇಶ್ ಆರೋಪಿಸಿದರು.

ಮಳವಳ್ಳಿ ತಾಲೂಕಿನ ಬೆಳಕವಾಡಿಯ ಬಿ.ಜಿ.ಪುರದಲ್ಲಿ ನಿನ್ನೆ  ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಅನುದಾನದ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 593 ಕೋಟಿ ರೂ. ವೆಚ್ಚದ ಬಿ.ಜಿ.ಪುರ ಹನಿನೀರಾವರಿ ಯೋಜನೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗಾಗಿ ನರೇಂದ್ರಸ್ವಾಮಿ ನೂರಾರು ಕೋಟಿ. ರೂ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಆದರೆ, ಶಾಸಕ ಅನ್ನದಾನಿ ಅವರು ಯಾವುದೇ ಹೊಸ ಅನುದಾನ ತರದೆ, ಮಾಜಿ ಶಾಸಕರು ಬಿಡುಗಡೆ ಮಾಡಿಸಿದ್ದ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭ ಜಿ.ಪಂ ಸದಸ್ಯ ಜಯಕಾಂತ ಅಂಕರಾಜು, ತಾಪಂ ಉಪಾಧ್ಯಕ್ಷ ಮಾಧು, ಸದಸ್ಯ ಪುಟ್ಟಸ್ವಾಮಿ, ಬಿ.ಜಿ.ಪುರ ಗ್ರಾಪಂ ಅಧ್ಯಕ್ಷೆ ಜ್ಯೋತಿ ಮಹೇಶ್, ಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಮಧುಮಾಲಿನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಂದರ್‌ರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: