ಪ್ರಮುಖ ಸುದ್ದಿ

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನಾಗೇಶ್ ಕಾಲೂರು ಆಯ್ಕೆ

ರಾಜ್ಯ( ಮಡಿಕೇರಿ) ಜ.7 :- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಆಯೋಜಿಸಲಾಗುವ 14 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬಹುಭಾಷ ಸಾಹಿತಿ ನಾಗೇಶ್ ಕಾಲೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್ ಲೋಕೇಶ್ ಸಾಗರ್ ಅವರು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ನಾಗೇಶ್ ಕಾಲೂರು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ಜನವರಿ 31 ಮತ್ತು ಫೆಬ್ರವರಿ 1 ರಂದು ನಿಡ್ತ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ಮಡಿಕೇರಿ ತಾಲೂಕು ಅಧ್ಯಕ್ಷರಾದ ಕುಡೆಕಲ್ ಸಂತೋಷ್, ವಿರಾಜಪೇಟೆ ಅಧ್ಯಕ್ಷ ಮಧೋಶ್ ಪೂವಯ್ಯ, ನಿರ್ದೇಶಕರುಗಳಾದ ಕೋಡಿ ಚಂದ್ರಶೇಖರ್, ಲೋಕನಾಥ್ ಅಮೆಚೂರ್, ಎಸ್.ಪಿ ಪ್ರಸನ್ನ ಮತ್ತಿತತರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: