ಮನರಂಜನೆ

`ಜಂಟಲ್ ಮ್ಯಾನ್’ ಸಿನಿಮಾದ ಟ್ರೈಲರ್ ರಿಲೀಸ್

ಬೆಂಗಳೂರು,ಜ.7-ನಟ ಪ್ರಜ್ವಲ್ ದೇವರಾಜ್ ಅಭಿನಯದ `ಜಂಟಲ್ ಮ್ಯಾನ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ನಟಿಸಿರುವ ಜಂಟಲ್ ಮ್ಯಾನ್ ಸಿನಿಮಾದ ಕಥೆ ಬಹಳ ವಿಭಿನ್ನವಾಗಿದೆ.

ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್‌ (ನಿದ್ರೆ ಮಾಡುವ ಕಾಯಿಲೆ) ಎಂಬ ರೋಗದಿಂದ ನಾಯಕ ಬಳಲುತ್ತಿದ್ದು, 18 ಗಂಟೆ ನಿದ್ದೆ ಮಾಡುವುದು ಹಾಗೂ 6 ಗಂಟೆ ಮಾತ್ರ ಎಚ್ಚರ ಆಗಿರುವ ವ್ಯಕ್ತಿತ್ವ ಹೊಂದಿರುತ್ತಾರೆ. ಅವನ ಜೀವನದಲ್ಲಿ ಏನೆಲ್ಲಾ ಆಗುತ್ತೆ ಎಂಬುದು ಕಥೆ.

ಜಡೇಶ್ ಕುಮಾರ್ ಹಂಪಿ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರವನ್ನು ಗುರುದೇಶ ಪಾಂಡೆ ನಿರ್ಮಿಸಿದ್ದಾರೆ. ಪ್ರಜ್ವಲ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಸಂಚಾರಿ ವಿಜಯ್, ಬೇಬಿ ಆರಾಧ್ಯ, ಭರತ್ ಕಲ್ಯಾಣ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಧನಂಜಯ್, ಕಿನ್ನಲ್ ರಾಜ್ ಅವರ ಸಾಹಿತ್ಯವಿದ್ದು, ಸಂಚಿತ್ ಹೆಗ್ಡೆ, ವಿಜಯ್ ಪ್ರಕಾಶ್, ವಸಿಷ್ಠ ಸಿಂಹ ಅವರ ಧ್ವನಿಯಲ್ಲಿ ಹಾಡುಗಳು ಮೂಡಿಬಂದಿದೆ. ಪ್ರಜ್ವಲ್ ನಟನೆಯ ನಿರೀಕ್ಷೆಯ ಚಿತ್ರಗಳಲ್ಲಿ ಜಂಟಲ್ ಮ್ಯಾನ್ ಪ್ರಮುಖವಾಗಿದ್ದು, ಈ ವರ್ಷದಲ್ಲಿ ತೆರೆಗೆ ಬರಲಿದೆ. (ಎಂ.ಎನ್)

Leave a Reply

comments

Related Articles

error: