ಪ್ರಮುಖ ಸುದ್ದಿ

ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಡಿಸಿಎಂ ಲಕ್ಷ್ಮಣ ಸವದಿ ಸೂಚನೆ

ರಾಜ್ಯ(ಬೆಂಗಳೂರು)ಜ.7:-  ನಾಳೆ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಹಿನ್ನೆಲೆ ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ನಾಳೆ  ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಆದೇಶ ಉಲ್ಲಂಘಿಸಿ ಕರ್ತವ್ಯಕ್ಕೆ ಗೈರಾದ್ರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕೆಎಸ್ ಆರ್ ಟಿಸಿ  ಮತ್ತು ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದು ತಿಳಿಸಿದ್ದಾರೆ.

ಹಾಗೆಯೇ   ಬಂದ್ ನಿಂದ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುತ್ತದೆ.  ಹೀಗಾಗಿ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸೂಚನೆ ನೀಡಲಾಗಿದೆ. ಇನ್ನು ಬಂದ್ ಹೆಸರಿನಲ್ಲಿ ಗಲಭೆ ಸೃಷ್ಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: