ಮೈಸೂರು

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ

ಮೈಸೂರು, ಜ.9:- ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ, ಬಹುಜನ ವಿದ್ಯಾರ್ಥಿ ಸಂಘ, ಎಸ್‌ಎಫ್‌ಐ, ಎಐಡಿಎಸ್‌ಒ ಸಂಘಟನೆಗಳು ನಿನ್ನೆ ಸಂಜೆ  ನಗರದ ಮಾನಸಗಂಗೋತ್ರಿಯಲ್ಲಿ ಪಂಜಿನ ಮೆರವಣಿಗೆ ನಡೆಸಿವೆ.

ಈ ಸಂದರ್ಭ ಮಾತನಾಡಿದ ಸಂಘಟನೆಗಳ ಮುಖಂಡರು ಕೆಲವು ಸಂಘಟನೆಗಳು ರಾತ್ರಿ ವೇಳೆ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ಅಲ್ಲಿನ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಕೃತ್ಯದಲ್ಲಿ ಎಬಿವಿಪಿ, ಆರ್‌ಎಸ್‌ಎಸ್, ಭಜರಂಗದಳ ಹಾಗೂ ಕೆಲವು ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂದೇಶ್, ಬಿವಿಎಸ್ ಅಧ್ಯಕ್ಷ ಸಂದೀಪ್, ಎಸ್‌ಎಫ್‌ಐ ಅಧ್ಯಕ್ಷ ವಿಷ್ಣು, ಎಐಡಿಎಸ್‌ಒ ಅಧ್ಯಕ್ಷರಾದ ಚಂದ್ರಕಲಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: