ಕರ್ನಾಟಕಮನರಂಜನೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜ.9-12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಡುಗಡೆಗೊಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಲಾಯಿತು.

ಫೆಬ್ರವರಿ 26 ರಂದು ಒರಾಯನ್ ಮಾಲ್ ನಲ್ಲಿ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಮಾರ್ಚ್ 4 ರವರೆಗೆ ಚಲನಚಿತ್ರ ಪ್ರದರ್ಶನ ನಡೆಯಲಿದೆ. ವಿಶ್ವದ 50 ದೇಶಗಳಿಂದ 200 ಸಮಕಾಲೀನ ಚಿತ್ರಗಳು ಪ್ರದರ್ಶನಗೊಳ್ಳಿಲಿದೆ.

ಒರಾಯನ್ ಮಾಲ್ ನಲ್ಲಿರುವ ಪಿವಿಆರ್ 11 ಸ್ಕ್ರೀನ್ ನಲ್ಲಿ ಸಿನಿಮಾ ಪ್ರದರ್ಶನ ನಡೆಯಲಿದೆ. ಸಿನಿಮೋತ್ಸವಕ್ಕೆ 800 ರೂ. ಶುಲ್ಕ, ಸಿನಿಮಾ ವಿದ್ಯಾರ್ಥಿಗಳಿಗೆ 400 ರೂ. ಶುಲ್ಕ ವಿಧಿಸಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: