ಮೈಸೂರು

ಪರೀಕ್ಷಾ ಕೊಠಡಿಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿ

ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೋರ್ವ ಪರೀಕ್ಷಾ ಕೊಠಡಿಯಲ್ಲೇ ಕುಸಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.

ಕುಸಿದು ಬಿದ್ದಾತನನ್ನು ಸದ್ವಿದ್ಯಾ ಶಾಲೆಯ ವಿದ್ಯಾರ್ಥಿ ಪ್ರೀತಂ ಎಂದು ಗುರುತಿಸಲಾಗಿದೆ. ಈತ ಲೋ ಶುಗರ್ ನಿಂದ ಬಳಲುತ್ತಿದ್ದು ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಕುಸಿದು ಬಿದ್ದ ವಿದ್ಯಾರ್ಥಿಯನ್ನು ತಕ್ಷಣ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈತ ಕುವೆಂಪುನಗರದ ವಿಜಯವಿಠಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಎಂದು ತಿಳಿದುಬಂದಿದೆ. (ಕೆ.ಎಸ್.ಎಸ್.ಎಚ್) ಚಿತ್ರ: ಕೆ.ಎಸ್.

Leave a Reply

comments

Related Articles

error: