ದೇಶಪ್ರಮುಖ ಸುದ್ದಿ

ಜಮ್ಮು-ಕಾಶ್ಮೀರದ ಸೋಪೋರ್ ನಲ್ಲಿ 3 ಕೆಜಿ ಐಇಡಿ ಪತ್ತೆ

ನವದೆಹಲಿ,ಜ.13-ಉಗ್ರರ ದಾಳಿಯನ್ನು ಭದ್ರತಾ ಪಡೆ ವಿಫಲಗೊಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಸೋಪೋರ್ ನಲ್ಲಿ ನಡೆದಿದೆ.

ಭದ್ರತಾ ಪಡೆ ಸುಮಾರು ಮೂರು ಕೆಜಿಯಷ್ಟು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಯನ್ನು ಜಮ್ಮು-ಕಾಶ್ಮೀರದ ಸೋಪೋರ್ ಸೇತುವೆ ಕೆಳಭಾಗದಲ್ಲಿ ಪತ್ತೆಹಚ್ಚುವ ಮೂಲಕ ಉಗ್ರರ ದಾಳಿಯನ್ನು ವಿಫಲಗೊಳಿಸಿದೆ.

33ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ರಫಿಯಾಬಾದ್ ಸೇತುವೆ ಕೆಳಗೆ ಸುಮಾರು 3 ಕೆಜಿಯಷ್ಟು ಐಇಡಿ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಅಪಾರ ಪ್ರಮಾಣದಲ್ಲಿ ಐಇಡಿ ಪತ್ತೆಯಾದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಐಇಡಿಯನ್ನು ನಿಷ್ಕ್ರಿಯಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. (ಎಂ.ಎನ್)

Leave a Reply

comments

Related Articles

error: