
ಪ್ರಮುಖ ಸುದ್ದಿ
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಕೊಡಗು ನಿವಾಸದ ಮೇಲೆ ಐಟಿ ದಾಳಿ
ರಾಜ್ಯ(ಮಡಿಕೇರಿ)ಜ.16:- ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಮುಂಜಾನೆಯಿಂದ ದಾಖಲೆ ಪರಿಶೀಲನೆ ನಡೆಸಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
‘ಕಿರಿಕ್ ಪಾರ್ಟಿ’ ಮೂಲಕ ಸಿನಿರಂಗದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. (ಕೆ.ಎಸ್,ಎಸ್.ಎಚ್)