ಮೈಸೂರು

ಮೈಸೂರು ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಎಡಿಜಿಪಿ ಶ್ಲಾಘನೆ

ಮೈಸೂರು ಪೊಲೀಸರು ರೌಡಿಗಳನ್ನು ನಿಗ್ರಹಿಸುವಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ ಅಷ್ಟೇ ಅಲ್ಲದೇ ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಮೋಹನ್ ಪೊಲೀಸರನ್ನು ಶ್ಲಾಘಿಸಿದರು.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂದು ವೀಕ್ಷಿಸಲು ಬಂದಿದ್ದೇನೆ. ಪೊಲೀಸರು ಚೆನ್ನಾಗಿಯೇ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ ಎಂದರು.ಮೈಸೂರು ನಗರದಲ್ಲಿ ಹೊಸ ಸುಸಜ್ಜಿತ ವಾಹನವನ್ನು ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ತೀವ್ರ ನಿಗಾವಹಿಸಲಾಗಿದೆ. ನಗರದ ಪ್ರಮುಖ ವೃತ್ತಗಳು ಹಾಗೂ ರಿಂಗ್ ರಸ್ತೆಗಳ ವೃತ್ತದಲ್ಲಿ ಸಿಸಿಕ್ಯಾಮರಾ ಅಳವಡಿಸುವ ಮೂಲಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಗರದಲ್ಲಿ ಕೋಮುಗಲಭೆ ತಡೆಯಲು ಸೂಕ್ತವಾದ ನೂತನ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಡಿಸಿಪಿಗಳಾದ ಶೇಖರ್, ರುದ್ರಮುನಿ ಮತ್ತಿತರರು ಉಪಸ್ಥಿತರಿದ್ದರು.(ಕೆ.ಎಸ್.ಎಸ್.ಎಚ್)

Leave a Reply

comments

Related Articles

error: