ಪ್ರಮುಖ ಸುದ್ದಿ

ಅಕ್ರಮ ಆಸ್ತಿಗಳಿಕೆ ಆರೋಪ : ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಕೆ.ಜೆ ಜಾರ್ಜ್ 

ರಾಜ್ಯ(ಬೆಂಗಳೂರು)ಜ.16:- ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ  ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಮಾಜಿ ಸಚಿವ ಕೆ.ಜೆ ಜಾರ್ಜ್  ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ದಾಖಲೆ ಸಮೇತ ಲೆಕ್ಕ ಪರಿಶೋಧಕರ ಜತೆ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಆಗಮಿಸಿದ್ದಾರೆ. ಮಾಜಿ ಸಚಿವ ಕೆ.ಜೆ ಜಾರ್ಜ್ ವಿದೇಶದಲ್ಲಿ ಮಕ್ಕಳ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ. ಅಕ್ರಮ ಆಸ್ತಿ ಹೊಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ರವಿಕೃಷ್ಣಾರೆಡ್ಡಿ ಎಂಬುವವರು ದೂರು ನೀಡಿದ್ದರು.

ರವಿಕೃಷ್ಣಾರೆಡ್ಡಿ ಅವರ ದೂರು ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಕೆ.ಜೆ ಜಾರ್ಜ್ , ಜಾರ್ಜ್ ಅವರ ಪತ್ನಿ ಸುಜಾ, ಪುತ್ರಿ ರೇನಿಟಾ ಹಾಗೂ ಮಗನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು.  ಇದೀಗ ಇಂದು ಮಾಜಿ ಸಚಿವ ಕೆ.ಜೆ ಜಾರ್ಜ್ ಒಬ್ಬರೇ ವಿಚಾರಣೆಗೆ ಹಾಜರಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: