ದೇಶಪ್ರಮುಖ ಸುದ್ದಿ

ನಿರ್ಭಯಾ ಹಂತಕರಿಗೆ ಫೆಬ್ರವರಿ 1 ರಂದು ಗಲ್ಲು

ನವದೆಹಲಿ,ಜ.17-ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಫೆಬ್ರವರಿ 1 ರಂದು ಗಲ್ಲಿಗೇರಿಸಲು ಮತ್ತೊಮ್ಮೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಫೆಬ್ರವರಿ 1ರಂದು ಬೆಳಿಗ್ಗೆ 6 ಗಂಟೆಗೆ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಬೇಕೆಂದು ದಿಲ್ಲಿ ನ್ಯಾಯಾಲಯ ಡೆತ್‌ ವಾರಂಟ್‌ ಜಾರಿ ಮಾಡಿದೆ.

ಅಪರಾಧಿಗಳ ಪೈಕಿ ಮುಖೇಶ್‌ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಜ.22ರಂದು ಗಲ್ಲಿಗೇರಿಸುವುದನ್ನು ಮುಂದೂಡಲಾಗಿತ್ತು. ಅಲ್ಲದೇ ಮತ್ತೊಮ್ಮೆ ಡೆತ್‌ ವಾರಂಟ್‌ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ದಿಲ್ಲಿ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.

ಅಪರಾಧಿಗಳಾದ ಮುಖೇಶ್‌, ಪವನ್‌ ಗುಪ್ತಾ, ವಿನಯ್‌ ಶರ್ಮಾ ಮತ್ತು ಅಕ್ಷಯ್‌ಕುಮಾರ್‌ ಸಿಂಗ್‌ಗೆ ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಧೀಶ ಸತೀಶ್‌ಕುಮಾರ್‌ ಅರೋರಾ ಡೆತ್‌ ವಾರಂಟ್‌ ಜಾರಿಗೊಳಿಸಿದ್ದಾರೆ.

ಈ ಮೊದಲು ಜ.22ರಂದು ಬೆಳಿಗ್ಗೆ 7 ಗಂಟೆಗೆ ತಿಹಾರ್‌ ಜೈಲಿನಲ್ಲಿ ಗಲ್ಲಿಗೇರಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶಿಸಿತ್ತು.

ಉತ್ತರ ಪ್ರದೇಶದ ಮೀರತ್‌ನಿಂದ ಹ್ಯಾಂಗಮನ್‌ ಕಳಸಿಕೊಡುವಂತೆ ತಿಹಾರ ಜೈಲಿನ ಅಧಿಕಾರಿಗಳು ಈಗಾಗಲೇ ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ.

ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಲಾಗುತ್ತದೆ. ನಿರ್ಭಯಾ ಅಪರಾಧಿಗಳಿಗೆ ನೇಣು ಕುಣಿಕೆ ಬಿಗಿಯುವ ಮುನ್ನ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಗಲ್ಲಿಗೇರಿಸುವ ‘ಡಮ್ಮಿ ಪ್ರಕ್ರಿಯೆ’ ನಡೆಯಲಿದೆ. (ಎಂ.ಎನ್)

Leave a Reply

comments

Related Articles

error: