ಪ್ರಮುಖ ಸುದ್ದಿ

ಜ.20 ರಂದು ಉದ್ಯೋಗಮೇಳ

ರಾಜ್ಯ(ಮಡಿಕೇರಿ) ಜ.18 :- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ, 20 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ “ಉದ್ಯೋಗಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ‘ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೋ. ಲಿಮಿಟೆಡ್-ಮಡಿಕೇರಿ, ರಾಣಿ ಮದ್ರಾಸ್-ಮೈಸೂರು, ಯುರೇಕೋ ಫೋರ್ಬ್ಸ್-ಬೆಂಗಳೂರು, ಕೋಗೆಂಟ್ ಇ-ಸರ್ವೀಸ್-ಮಂಗಳೂರು, ಜಸ್ಟ್ ಡಯಲ್-ಬೆಂಗಳೂರು ಹಾಗೂ ಸುರಭಿ ಪ್ಲಾನ್‍ಟೆಕ್-ಮೈಸೂರು’ ಸಂಸ್ಥೆಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ.ಜಗನ್ನಾಥ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: