ಪ್ರಮುಖ ಸುದ್ದಿ

ಜ.24 ರಂದು ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾವಿಧಿ ಸ್ವೀಕಾರ

ರಾಜ್ಯ( ಮಡಿಕೇರಿ) ಜ.18 :- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜ.25 ರಂದು ರಾಷ್ಟ್ರೀಯ ಮತದಾರರ ದಿವಸವನ್ನಾಗಿ ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಹೋಬಳಿ ಮಟ್ಟದಲ್ಲಿ, ಗ್ರಾಮ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಆಚರಿಸಲಾಗುತ್ತಿದೆ.

ಈ ಸಂಬಂಧ ಜ.25 ರಂದು ಸಾರ್ವತ್ರಿಕ ರಜಾ ದಿನವಿರುವುದರಿಂದ ಮತದಾರರ ಪ್ರತಿಜ್ಞೆಯನ್ನು ಜನವರಿ, 24 ರಂದು ತೆಗೆದುಕೊಳ್ಳುವಂತೆ ಸೂಕ್ತ ಕ್ರಮವಹಿಸುವಂತೆ ತಿಳಿಸಿದ್ದು, ಕೊಡಗು ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖಾಧಿಕಾರಿಗಳು ಮತ್ತು ಎಲ್ಲಾ ಶಾಲೆ, ಕಾಲೇಜುಗಳ ಮುಖ್ಯಸ್ಥರು ತಮ್ಮ ಕಚೇರಿಯಲ್ಲಿ ಜನವರಿ, 24 ರಂದು ಬೆಳಗ್ಗೆ 11 ಗಂಟೆಗೆ ಮತದಾರರ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.(ಕೆಸಿಐ,ಎಸ್.ಎಚ್)

Leave a Reply

comments

Related Articles

error: