ಸುದ್ದಿ ಸಂಕ್ಷಿಪ್ತ

ನಾಳೆ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಮಡಿಕೇರಿ ಜ.18 : ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್, ರೆಡ್ ಕ್ರಾಸ್, ರಾ.ಸೇ.ಯೋಜನಾ ಘಟಕದ ವತಿಯಿಂದ ಜನವರಿ, 20 ರಂದು ಮಧ್ಯಾಹ್ನ 1.30 ಗಂಟೆಗೆ ಏಡ್ಸ್ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಿತ್ರಾ ವೈ. ಮೇಲ್ವಿಚಾರಕರು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಸುನಿತಾ ಮುತ್ತಣ್ಣ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕೆ.ಸಿ.ದಯಾನಂದ ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: