ಮೈಸೂರು

ವಾರ್ಡ್ ನಂ.28ಕ್ಕೆ ನಂದೀಶ್ ಪ್ರೀತಂ ಭೇಟಿ : ಸಮಸ್ಯೆ ಪರಿಹರಿಸುವ ಭರವಸೆ

ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ 28 ರ ಕುಂಬಾರ ಕೊಪ್ಪಲುಗೆ ಪಟ್ಟಣ ಮತ್ತು ನಗರ ಯೋಜನೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಂದೀಶ್ ಪ್ರೀತಂ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ವಾರ್ಡ್ ನಂ 28 ಕ್ಕೆ ಭೇಟಿ ನೀಡಿದ್ದೇನೆ. ಈ ವಾರ್ಡ್ ನಲ್ಲಿ ಒಳಚರಂಡಿ ಸಮಸ್ಯೆ ಎದ್ದು ಕಾಣುತ್ತಿದೆ. ಅದರ ಜೊತೆಯಲ್ಲಿ 14 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಇಲ್ಲಿನ ರಸ್ತೆ ಕಾಮಗಾರಿ ಕಳಪೆ ಮಟ್ಟದಲ್ಲಿ  ನಡೆಯುತ್ತಿದ್ದು, ಇದೀಗ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ತರಟೆಗೆ ತಗೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುವುದು ಎಂದರು.

 ಇದೇ ವೇಳೆ ಸ್ಥಾಯಿ ಸಮಿತಿಯ ಸದಸ್ಯರು. ವಾರ್ಡನ .ಸದಸ್ಯರು ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.(ಬಿ.ಎಂ-ಎಸ್.ಎಚ್)

Leave a Reply

comments

Related Articles

error: