
ಪ್ರಮುಖ ಸುದ್ದಿವಿದೇಶ
ದುಷ್ಕರ್ಮಿಗಳು ನಡೆಸಿದ ಹಲ್ಲೆಯಿಂದ ಬ್ರಿಟನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವು
ವಿದೇಶ(ಲಂಡನ್) ಜ.21:- ಭಾರತೀಯ ಮೂಲದ ಸಿಖ್ ವಿದ್ಯಾರ್ಥಿಯೋರ್ವರ ಮೇಲೆ ಬ್ರಿಟನ್ನ ಮಿಡ್ಲ್ಯಾಂಡ್ಸ್ ವಲಯದ ನಾಟಿಂಗ್ಹ್ಯಾಮ್ನಲ್ಲಿರುವ ಪಬ್ ಬಳಿ ದುಷ್ಕರ್ಮಿಗಳು ನಡೆಸಿದ ಹಲ್ಲೆ ನಡೆಸಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಅರ್ಜುನ್ ಸಿಂಗ್ ಎಂಬವರೇ ಮೃತಪಟ್ಟವರಾಗಿದ್ದು, ನಾಟಿಂಗ್ಹ್ಯಾಮ್ ಟ್ರೆಂಟ್ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. 20 ವರ್ಷದ ಅರ್ಜುನ್ ಸಿಂಗ್ ಮೇಲೆ ಶನಿವಾರ ಸಂಜೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ ಎನ್ನಲಾಗಿದೆ.
ಕುಡಿದ ಮತ್ತಿನಲ್ಲಿ ಆರೋಪಿಗಳು ಈ ಕೃತ್ಯ ಎಸಗಿರಬಹುದೆಂದು ಅನುಮಾನಿಸಲಾಗಿದ್ದು, ಘಟನೆ ಸಂಬಂಧ ಪೊಲೀಸರು ಸಿಸಿಟಿವಿಗಳನ್ನು ಜಾಲಾಡಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡವು ತೀವ್ರ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. (ಏಜೆನ್ಸಿಸ್, ಎಸ್.ಎಚ್)