
ಪ್ರಮುಖ ಸುದ್ದಿ
ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆ.ಆರ್.ಎಸ್. ಜಲಾಶಯಕ್ಕೆ ಬಿಗಿ ಭದ್ರತೆ
ರಾಜ್ಯ(ಮಂಡ್ಯ)ಜ.21:- ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಬಿಗಿ ಭದ್ರತೆಯನ್ನೊದಗಿಸಲಾಗಿದೆ.
ಜಲಾಶಯದ ಸುತ್ತಮುತ್ತ ಪೊಲೀಸರು ತಪಾಸಣೆ ನಡೆಸಿದ್ದು, ಜಲಾಶಯಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳದಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಕೆಆರ್ ಎಸ್ ಗೆ ಬರುವ ಪ್ರವಾಸಿಗರ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಜಲಾಶಯದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನೊದಗಿಸಲಾಗಿದೆ. (ಕೆ.ಎಸ್,ಎಸ್.ಎಚ್)